ತೀತನಿಗೆ 1:5 - ಪರಿಶುದ್ದ ಬೈಬಲ್5 ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ: ಅಧ್ಯಾಯವನ್ನು ನೋಡಿ |
ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.