ತೀತನಿಗೆ 1:6 - ಪರಿಶುದ್ದ ಬೈಬಲ್6 ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 “ಎಕ್ ವಡಿಲ್ ಚುಕೆತ್ ನಸಲ್ಲೊ ರ್‍ಹಾವ್ಚೊ; ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ,” ತೆಚಿ ಪೊರಾ ದೆವಾಕ್ ವಿಶ್ವಾಸಾನ್ ರ್‍ಹಾವ್ಚಿ, ಅನಿ ಗೊಸ್ಟ್ ಮಾನಿನಸಲ್ಲಿ ಪೊರಾ ಮನ್ವುನ್ ಘೆವ್ನ್ ಕಟೊರ್ ಸ್ವಬಾವಾಚೆ ಹೊವ್ನ್ ರ್‍ಹಾವ್ಚೆ ನ್ಹಯ್. ಅಧ್ಯಾಯವನ್ನು ನೋಡಿ |