ತೀತನಿಗೆ 1:7 - ಪರಿಶುದ್ದ ಬೈಬಲ್7 ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್ ದೆವಾಚ್ಯಾ ಕಾಮಾಚ್ಯಾ ವಿಶಯಾತ್ ಜವಾಬ್ದಾರಿ ಘೆಟಲ್ಲೊ ರ್‍ಹಾತಾ, ತಸೆ ಹೊವ್ನ್ ತೊ ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೊ ಚಿರ್ಡುನ್ ಬೊಲ್ತಲೊ ನಾ ಹೊಲ್ಯಾರ್ ಎಗ್ದಮ್ ರಾಗ್ ಕರುನ್ ಘೆತಲೊ, ನಾ ಹೊಲ್ಯಾರ್ ಎಕ್ ಫಿದೊಡೊ ನಾ ಹೊಲ್ಯಾರ್ ಮಂಡ್ ನಾ ಹೊಲ್ಯಾರ್ ಪೈಶಾಂಚಿ ಅಶಾ ಹೊತ್ತೊ ರ್‍ಹಾವ್ಚೊ ನ್ಹಯ್. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.