ತೀತನಿಗೆ 2:13 - ಪರಿಶುದ್ದ ಬೈಬಲ್13 ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಮಿ ಆಶಿರ್ವಾದಾನ್ ಭರಲ್ಲ್ಯಾ ದಿಸಾಸಾಟಿ ಬರೊಸ್ಯಾನ್ ವಾಟ್ ರಾಕುನ್ ಹೊತ್ತ್ಯಾ ಸರ್ಕೆ ಮೊಟ್ಯಾ ದೆವಾಚಿ ಅನಿ ರಾಕನ್ದಾರ್ ಜೆಜು ಕ್ರಿಸ್ತಾಚಿ ಮಹಿಮಾ ಪ್ರಕಟ್ ಹೊತಾ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.