Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:6 - ಪರಿಶುದ್ದ ಬೈಬಲ್‌

6 ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತಸೆಚ್ ದಾಂಡ್ಗ್ಯಾ ಘೊಮನ್ಸಾಕ್ನಿಬಿ ಅಪ್ಲ್ಯಾ ಅಪ್ನಾಕ್ ಸಂಬಾಳುಚೆ ಮನುನ್ ವಿನಂತಿ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:6
9 ತಿಳಿವುಗಳ ಹೋಲಿಕೆ  

ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ


ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.


ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು; ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.


ಆದುದರಿಂದ ನಾವು ಇತರ ಜನರಂತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿಂದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು