ತೀತನಿಗೆ 3:10 - ಪರಿಶುದ್ದ ಬೈಬಲ್10 ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಭೆಯಲ್ಲಿ ಭೇದಹುಟ್ಟಿಸುವ ಮನುಷ್ಯನನ್ನು ಎರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಝಗ್ಡೊ ಉಟ್ವುತಲ್ಯಾ ಮಾನ್ಸಾಕ್ ಎಗ್ದಾ ನಾ ತರ್ ದೊನ್ದಾ ಉಶಾರ್ಕಿ ದಿ ತೆಚ್ಯಾ ಮಾನಾ ತೆಜ್ಯಾಕ್ನಾ ಧುರ್ ರ್‍ಹಾ. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.