ತೀತನಿಗೆ 3:2 - ಪರಿಶುದ್ದ ಬೈಬಲ್2 ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕೊನಾಚ್ಯಾ ವಿಶಯಾತ್‍ಬಿ ಬುರ್ಶೆ ಬೊಲುಚೆ ನ್ಹಯ್, ಸಮಾದಾನಾನ್ ಅನಿ ದೊಸ್ತಾಗಿರಿನ್ ರ್‍ಹಾವ್ಚೆ, ಅನಿ ಸಗ್ಳ್ಯಾಂಚ್ಯಾ ವಾಂಗ್ಡಾ ಬರೆ ಕರುನ್ ರ್‍ಹಾವ್ಚೆ ಮನುನ್ ಸಾಂಗ್. ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.