ದಾನಿಯೇಲ 1:12 - ಪರಿಶುದ್ದ ಬೈಬಲ್12 ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ, ಪಾನಕ್ಕೆ ನೀರು ನಮಗೆ ಒದಗಲಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.