ದಾನಿಯೇಲ 1:15 - ಪರಿಶುದ್ದ ಬೈಬಲ್15 ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಹತ್ತು ದಿನಗಳ ಮೇಲೆ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ ಪುಷ್ಟರಾಗಿಯೂ ಕಾಣಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”