ದಾನಿಯೇಲ 1:9 - ಪರಿಶುದ್ದ ಬೈಬಲ್9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ಆದರೆ ಅಶ್ಪೆನಜನು ದಾನಿಯೇಲನಿಗೆ, “ನಾನು ನನ್ನ ಒಡೆಯನಾದ ಅರಸನಿಗೆ ಹೆದರುತ್ತೇನೆ. ಈ ಆಹಾರ ಮತ್ತು ಪಾನೀಯಗಳನ್ನು ನಿನಗೆ ಕೊಡಬೇಕೆಂದು ಅರಸನು ಅಪ್ಪಣೆ ಮಾಡಿದ್ದಾನೆ. ನೀನು ಈ ಆಹಾರವನ್ನು ತೆಗೆದುಕೊಳ್ಳದಿದ್ದರೆ ಅಶಕ್ತನಾಗಿಯೂ ಅಸ್ವಸ್ಥನಾಗಿಯೂ ಕಾಣಿಸುವೆ. ನೀನು ನಿನ್ನ ವಯಸ್ಸಿನ ಬೇರೆ ತರುಣರಿಗಿಂತ ಸೊರಗಿದವನಾಗಿ ಕಾಣುವೆ. ಅರಸನು ಇದನ್ನು ಗಮನಿಸಿ ನನ್ನ ಮೇಲೆ ಕೋಪಗೊಂಡು ನನ್ನ ತಲೆಯನ್ನೇ ಕತ್ತರಿಸಬಹುದು. ಅದಕ್ಕೆ ನೀನೇ ಹೊಣೆಯಾಗುವೆ” ಎಂದನು.
ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.