Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:12 - ಪರಿಶುದ್ದ ಬೈಬಲ್‌

12 ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:12
26 ತಿಳಿವುಗಳ ಹೋಲಿಕೆ  

ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ?


ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು.


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.


ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.


“ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು