ದಾನಿಯೇಲ 10:13 - ಪರಿಶುದ್ದ ಬೈಬಲ್13 ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ] ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು. ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.