ದಾನಿಯೇಲ 10:14 - ಪರಿಶುದ್ದ ಬೈಬಲ್14 ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”