Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:16 - ಪರಿಶುದ್ದ ಬೈಬಲ್‌

16 ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:16
29 ತಿಳಿವುಗಳ ಹೋಲಿಕೆ  

ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆ ಮತ್ತು ಅದರ ಅರ್ಥವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದೆ. ನಾನು ಈ ದರ್ಶನದ ಬಗ್ಗೆ ವಿಚಾರ ಮಾಡುತ್ತಿದ್ದಾಗ ಮನುಷ್ಯನಂತಿದ್ದವನೊಬ್ಬನು ನನ್ನ ಎದುರಿಗೆ ನಿಂತಿದ್ದನು.


ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


“ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”


“ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.


ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.


ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ.


ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.


ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು.


ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.


ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.


ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.


ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.


ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.


ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು