Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:2 - ಪರಿಶುದ್ದ ಬೈಬಲ್‌

2 ದಾನಿಯೇಲನು ಹೇಳುವುದೇನೆಂದರೆ: ಆ ಸಮಯದಲ್ಲಿ ದಾನಿಯೇಲನೆಂಬ ನಾನು ಮೂರು ವಾರ ಶೋಕದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:2
13 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.


ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ.


ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು