ದಾನಿಯೇಲ 10:21 - ಪರಿಶುದ್ದ ಬೈಬಲ್21 ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 (ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.” ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.