ದಾನಿಯೇಲ 10:5 - ಪರಿಶುದ್ದ ಬೈಬಲ್5 ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು. ಅಧ್ಯಾಯವನ್ನು ನೋಡಿ |