Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:6 - ಪರಿಶುದ್ದ ಬೈಬಲ್‌

6 ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ಝಗಝಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:6
18 ತಿಳಿವುಗಳ ಹೋಲಿಕೆ  

ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.


ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವಗಳಲ್ಲಿ ಕೆಳಗಿಳಿಸುತ್ತಿದ್ದವು.


ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.


ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.


ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.


ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು.


ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.


“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.


ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.


ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.


ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನ್ನು ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಬೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು