Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:7 - ಪರಿಶುದ್ದ ಬೈಬಲ್‌

7 ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:7
8 ತಿಳಿವುಗಳ ಹೋಲಿಕೆ  

ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.


ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು.


ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.


ಆ ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು.


ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.


“ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು