Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:12 - ಪರಿಶುದ್ದ ಬೈಬಲ್‌

12 ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:12
19 ತಿಳಿವುಗಳ ಹೋಲಿಕೆ  

ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.


ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು