ದಾನಿಯೇಲ 11:17 - ಪರಿಶುದ್ದ ಬೈಬಲ್17 ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.