ದಾನಿಯೇಲ 11:18 - ಪರಿಶುದ್ದ ಬೈಬಲ್18 “ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹು ದೇಶಗಳನ್ನು ಆಕ್ರವಿುಸುವನು; ಆದರೆ ಅವನು ಮಾಡುವ ಅವಮಾನವನ್ನು ಒಬ್ಬ ಸರದಾರನು ನಿಲ್ಲಿಸಿಬಿಡುವದಲ್ಲದೆ ಅದು ಅವನಿಗೇ ತಗಲುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.