ದಾನಿಯೇಲ 11:24 - ಪರಿಶುದ್ದ ಬೈಬಲ್24 “ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು; ತಂದೆತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು; ಸೂರೆಸುಲಿಗೆ ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು; ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು. ಅಧ್ಯಾಯವನ್ನು ನೋಡಿ |
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.