Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:31 - ಪರಿಶುದ್ದ ಬೈಬಲ್‌

31 ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:31
18 ತಿಳಿವುಗಳ ಹೋಲಿಕೆ  

“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


“ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.


“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು