ದಾನಿಯೇಲ 11:32 - ಪರಿಶುದ್ದ ಬೈಬಲ್32 “ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು. ಅಧ್ಯಾಯವನ್ನು ನೋಡಿ |
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”