ದಾನಿಯೇಲ 11:37 - ಪರಿಶುದ್ದ ಬೈಬಲ್37 “ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.