Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:38 - ಪರಿಶುದ್ದ ಬೈಬಲ್‌

38 ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:38
8 ತಿಳಿವುಗಳ ಹೋಲಿಕೆ  

ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.


“ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.


“ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು.


“ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು