Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:40 - ಪರಿಶುದ್ದ ಬೈಬಲ್‌

40 “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:40
24 ತಿಳಿವುಗಳ ಹೋಲಿಕೆ  

ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.


“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


“ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.


ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.


ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.


“ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.


“ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.


ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು