Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:43 - ಪರಿಶುದ್ದ ಬೈಬಲ್‌

43 ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಮತ್ತು ಈಜಿಪ್ಟಿನ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನು ವಶಪಡಿಸಿಕೊಳ್ಳುವನು. ಲೂಬ್ಯರು ಮತ್ತು ಕೂಷ್ಯರು ಅವನ ಸ್ವಾಮ್ಯವನ್ನು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನೂ ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು; ಲೂಬ್ಯರೂ ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:43
9 ತಿಳಿವುಗಳ ಹೋಲಿಕೆ  

ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು.


ಇಥಿಯೋಫಿಯಾ ಮತ್ತು ಈಜಿಪ್ಟ್ ತೆಬೆಸ್‌ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿದವು.


ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು.


ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು.


ಹೀಗಿರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೊಚ್ಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು