Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:5 - ಪರಿಶುದ್ದ ಬೈಬಲ್‌

5 “ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಆ ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ದಕ್ಷಿಣ ದಿಕ್ಕಿನ ರಾಜನು ಮತ್ತು ಅವನ ದಳವಾಯಿಗಳಲ್ಲಿ ಒಬ್ಬನು ಶಕ್ತಿಶಾಲಿಗಳಾಗುವರು. ದಳವಾಯಿ ರಾಜನಿಗಿಂತ ಶಕ್ತಿಶಾಲಿಯಾಗಿ ಪ್ರಭುತ್ವಕ್ಕೆ ಬರುವನು. ಅವನ ರಾಜ್ಯ ದೊಡ್ಡ ರಾಜ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಕ್ಷಿಣದಿಕ್ಕಿನ ರಾಜನೂ ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು; ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು; ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:5
7 ತಿಳಿವುಗಳ ಹೋಲಿಕೆ  

“ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.


“ಆ ಕಾಲದಲ್ಲಿ ಹಲವಾರು ಜನರು ದಕ್ಷಿಣ ರಾಜನ ವಿರುದ್ಧವಾಗಿರುವರು. ಹೋರಾಡಲು ಇಚ್ಛಿಸುವ ನಿಮ್ಮ ಸ್ವಂತ ಜನರಲ್ಲಿ ಕೆಲವರು ದಕ್ಷಿಣ ರಾಜನ ವಿರುದ್ಧ ದಂಗೆ ಏಳುವರು. ಅವರು ಗೆಲ್ಲುವದಿಲ್ಲ. ಅವರು ಹೀಗೆ ಮಾಡಿ ದರ್ಶನ ನಿಜವಾಗುವಂತೆ ಮಾಡುವರು.


ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು