6 ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.
6 ಇವರಲ್ಲಿ ಒಬ್ಬನು - ಈ ಅಪೂರ್ವಕಾರ್ಯಗಳು ಕೊನೆಗಾಣುವದಕ್ಕೆ ಎಷ್ಟು ಕಾಲ ಹಿಡಿಯುವದು ಎಂದು ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ಪುರುಷನನ್ನು ಕೇಳಲು ಆ ಪುರುಷನು ಎಡಬಲಕೈಗಳನ್ನು
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.
ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.
ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.