ದಾನಿಯೇಲ 12:8 - ಪರಿಶುದ್ದ ಬೈಬಲ್8 ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ; ಆಗ ನಾನು - ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು ಎಂದು ಪ್ರಶ್ನೆಮಾಡಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.