Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:1 - ಪರಿಶುದ್ದ ಬೈಬಲ್‌

1 ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:1
14 ತಿಳಿವುಗಳ ಹೋಲಿಕೆ  

ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)


ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.


ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.


ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.


“ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು