ದಾನಿಯೇಲ 2:10 - ಪರಿಶುದ್ದ ಬೈಬಲ್10 ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಆ ಪಂಡಿತರು ಸನ್ನಿಧಿಯ ಮುಂದೆ - ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾವನೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸನನ್ನಾಗಲಿ ಮಾಟಗಾರನನ್ನಾಗಲಿ ಪಂಡಿತನನ್ನಾಗಲಿ ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |