ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”
ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.
ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.
“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.
ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.