ದಾನಿಯೇಲ 2:12 - ಪರಿಶುದ್ದ ಬೈಬಲ್12 ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.