Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:18 - ಪರಿಶುದ್ದ ಬೈಬಲ್‌

18 ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:18
22 ತಿಳಿವುಗಳ ಹೋಲಿಕೆ  

‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.


“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.


ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”


“ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.


ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.


ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು