ದಾನಿಯೇಲ 2:20 - ಪರಿಶುದ್ದ ಬೈಬಲ್20 “ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.