Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:22 - ಪರಿಶುದ್ದ ಬೈಬಲ್‌

22 ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:22
37 ತಿಳಿವುಗಳ ಹೋಲಿಕೆ  

ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.


ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.


ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ; ಮರಣವು ಆತನಿಗೆ ಮರೆಯಾಗಿಲ್ಲ.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.


ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”


“ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.


ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’


ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು