Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:23 - ಪರಿಶುದ್ದ ಬೈಬಲ್‌

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:23
33 ತಿಳಿವುಗಳ ಹೋಲಿಕೆ  

ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.


ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯಕೋಟೆಯನ್ನು ನಾಶಮಾಡಬಲ್ಲನು.


ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟುಹೋಗಕೂಡದೆಂದು ನಾನು ಪ್ರಾರ್ಥಿಸುತ್ತೇನೆ.


ಯೆಹೋವನು ತನ್ನೊಳಗೆ ಹೀಗೆಂದುಕೊಂಡನು: “ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ?


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.


ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು