ದಾನಿಯೇಲ 2:25 - ಪರಿಶುದ್ದ ಬೈಬಲ್25 ಕೂಡಲೇ ಅರ್ಯೋಕನು ದಾನಿಯೇಲನನ್ನು ಅರಸನ ಹತ್ತಿರ ಕರೆದುಕೊಂಡು ಹೋದನು. ಅರ್ಯೊಕನು ಅರಸನಿಗೆ, “ಯೆಹೂದದಿಂದ ಸೆರೆಯಾಳಾಗಿ ತಂದವರಲ್ಲಿ ಅರಸನ ಕನಸನ್ನು ಮತ್ತು ಅದರ ಅರ್ಥವನ್ನು ಹೇಳಬಲ್ಲ ಒಬ್ಬನನ್ನು ನಾನು ಕಂಡುಹಿಡಿದಿದ್ದೇನೆ. ಅವನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕೂಡಲೆ ಅರ್ಯೋಕನು ದಾನಿಯೇಲನನ್ನು ಸನ್ನಿಧಿಗೆ ತ್ವರೆಯಾಗಿ ಕರೆದುಕೊಂಡು ಹೋಗಿ - ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ ಎಂದು ಅರಿಕೆಮಾಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿ |