ದಾನಿಯೇಲ 2:26 - ಪರಿಶುದ್ದ ಬೈಬಲ್26 ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು. ಅಧ್ಯಾಯವನ್ನು ನೋಡಿ |
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.