ದಾನಿಯೇಲ 2:3 - ಪರಿಶುದ್ದ ಬೈಬಲ್3 ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.