Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:32 - ಪರಿಶುದ್ದ ಬೈಬಲ್‌

32 ಆ ಪ್ರತಿಮೆಯ ತಲೆಯನ್ನು ಚೊಕ್ಕ ಚಿನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ, ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:32
11 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.


ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು