Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:34 - ಪರಿಶುದ್ದ ಬೈಬಲ್‌

34 ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:34
25 ತಿಳಿವುಗಳ ಹೋಲಿಕೆ  

“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’


ಇವರು ರಕ್ತದಿಂದಾಗಲಿ ಕಾಮದಿಂದಾಗಲಿ ಪುರುಷನ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ. ಇವರು ದೇವರಿಂದಲೇ ಹುಟ್ಟಿದವರು.


ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ.


ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು.


“ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ.


ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು