ದಾನಿಯೇಲ 2:35 - ಪರಿಶುದ್ದ ಬೈಬಲ್35 ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು. ಅಧ್ಯಾಯವನ್ನು ನೋಡಿ |