ದಾನಿಯೇಲ 2:37 - ಪರಿಶುದ್ದ ಬೈಬಲ್37 ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.