ದಾನಿಯೇಲ 2:4 - ಪರಿಶುದ್ದ ಬೈಬಲ್4 ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.