Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:41 - ಪರಿಶುದ್ದ ಬೈಬಲ್‌

41 “ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:41
8 ತಿಳಿವುಗಳ ಹೋಲಿಕೆ  

“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.


“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.


ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು