Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:42 - ಪರಿಶುದ್ದ ಬೈಬಲ್‌

42 ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಕಾಲ್ಬೆರಳುಗಳ ಒಂದಂಶ ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶ ಗಟ್ಟಿ ಇನ್ನೊಂದು ಅಂಶ ಬೆಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಕಾಲ್ಬೆರಳುಗಳ ಒಂದಂಶವು ಕಬ್ಬಿಣ ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ ಒಂದಂಶವು ಬೆಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:42
4 ತಿಳಿವುಗಳ ಹೋಲಿಕೆ  

ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.


“ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.


ಕಬ್ಬಿಣ ಮತ್ತು ಜೇಡಿಮಣ್ಣು ಬೆರೆಸಿದ್ದನ್ನು ನೀನು ನೋಡಿರುವೆ. ಆದರೆ ಕಬ್ಬಿಣ ಮತ್ತು ಜೇಡಿಮಣ್ಣು ಸಂಪೂರ್ಣವಾಗಿ ಪರಸ್ಪರ ಬೆರೆಯುವದಿಲ್ಲ. ಅದೇ ರೀತಿ ನಾಲ್ಕನೇ ರಾಜ್ಯದ ಜನರು ಪರಸ್ಪರ ಕೂಡಿದ್ದರೂ ಸಹ ಒಂದೇ ಜನರಲ್ಲಿರಬೇಕಾದ ಏಕತೆ ಅವರಲ್ಲಿರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು